Saturday, March 7, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದಬೆಟ್ಟು ವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ – ಕಹಳೆ ನ್ಯೂಸ್

ಇಂದಬೆಟ್ಟು ಗ್ರಾಮದ ತುರ್ಕರೆಬೆಟ್ಟು ರಾಜೇಶ್ ಬಿನ್ ಉರ್ಮಿಶ್ ರವರ ದನದ ಹಟ್ಟಿ, ಕೊಟ್ಟಿಗೆ ಹಾಗೂ ರಬ್ಬರ್ ಸ್ಮೋಕ್ ಹೌಸ್ ಗೆ ತಡ ರಾತ್ರಿ 12.30 ರ ವೇಳೆಗೆ ಆಕಸ್ಮಿಕ ಬೆಂಕಿ ತಗಲಿ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುತ್ತದೆ.

ಈ ಸಂದರ್ಭದಲ್ಲಿ ಸ್ಥಳಿಯರ ತುರ್ತು ಸಹಕಾರದಿಂದ ಹಟ್ಟಿಯಲ್ಲಿ ಕಟ್ಟಿದ್ದ ದನ ಹಾಗೂ ಕರುವನ್ನು ರಕ್ಷಿಸಲಾಗಿದೆ, ನೀರು ಹಾಕಿ ಬೆಂಕಿ ನಂದಿಸಲಾಗಿದೆ, ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ. ಕೊಟ್ಟಿಗೆಯಲ್ಲಿ ಇದ್ದ ರಬ್ಬರ್ ಸೀಟ್, ಅಡಿಕೆ ಹಾಗೂ ಕೃಷಿ ಸಂಬಂಧಿತ ಉಪಕರಣಗಳು, ಮೇಲ್ಚಾವಣಿ ಸುಟ್ಟು ಹೋಗಿದೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ, ಸದಸ್ಯರಾದ ಶ್ರೀಕಾಂತ್ ಎಸ್, ಶ್ರೀಮತಿ ಸುಮಿತ್ರಾ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು