ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳಿಂದ ತೀವ್ರಗೊಂಡ ಪ್ರತಿಭಟನೆ: ಬಾಂಗ್ಲಾ ರಾಯಭಾರ ಕಚೇರಿಗೆ ನುಗ್ಗಲು ಯತ್ನ-ಕಹಳೆ ನ್ಯೂಸ್

ನವದೆಹಲಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ತೀವ್ರಗೊಂಡಿದೆ.
ನವದೆಹಲಿಯಲ್ಲಿರುವ ಬಾಂಗ್ಲಾ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಬಾಂಗ್ಲಾದಲ್ಲಿ ಹಿಂದೂ ಯುವಕ ದೀಪು ಚಂದ್ರದಾಸ್ ಹತ್ಯೆ ಖಂಡಿಸಿ ಪ್ರತಿಭಟನೆ ತೀವ್ರಗೊಂಡಿಇದೆ.
ದೆಹಲಿಯಲ್ಲಿರುವ ಬಾಂಗ್ಲಾ ರಾಯಭಾರ ಕಚೇರಿಗೆ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಕಚೇರಿಯತ್ತ ಮುನ್ನುಗ್ಗಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ಪೊಲೀಸರು ಪ್ರತಿಭಟನಾಕಾರರನ್ನು ಚದುಸಿಸಿದ್ದು, ಸದ್ಯ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.














