Saturday, March 7, 2026
ಚಿತ್ರದುರ್ಗರಾಜ್ಯಸುದ್ದಿ

ಚಿತ್ರದುರ್ಗ ಬಸ್ ದುರಂತ : ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಜಿಗಿದ ಇಬ್ಬರು ಯುವತಿಯರು-ಕಹಳೆ ನ್ಯೂಸ್

ಚಿತ್ರದುರ್ಗ : ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 11 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ಬೇಸರದ ಸಂಗತಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದ ಹಲವು ಭಯಾನಕ ವೀಡಿಯೋಗಳು ವೈರಲ್ ಆಗುತ್ತಿದೆ.

ಜಾಹೀರಾತು
ಜಾಹೀರಾತು

ಬಸ್ ನಲ್ಲಿ ಸಿಲುಕಿದ್ದ ಇಬ್ಬರು ಯುವತಿಯರು ಕಿಟಕಿಯಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯರು ಬೆಂಕಿಯಲ್ಲಿ ಸಿಲುಕಿದ್ದಾರೆ. ತಮ್ಮ ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಜಿಗಿದಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 11 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ.ಡಿವೈಡರ್ ದಾಟಿ ಬಂದ ಲಾರಿ ಸೀಬರ್ಡ್ ಖಾಸಗಿ ಸ್ಲೀಪರ್ ಕೋಚ್ ಬಸ್ ಗೆ ಡಿಕ್ಕಿ ಹೊಡೆದಿದ್ದು, 11 ಮಂದಿ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಕೆಲವೇ ಸೆಕೆಂಡುಗಳಲ್ಲಿ, ವಾಹನವು ದಟ್ಟ ಹೊಗೆ ಮತ್ತು ಎತ್ತರದ ಜ್ವಾಲೆಗಳಿಂದ ಆವೃತವಾಯಿತು, ಕ್ಯಾಬಿನ್ ಒಳಗೆ ಮಲಗಿದ್ದ ಅನೇಕ ಪ್ರಯಾಣಿಕರು ಸಿಕ್ಕಿಹಾಕಿಕೊಂಡರು. ಬಸ್ ಚಾಲಕ, ಕ್ಲೀನರ್ ಮತ್ತು ಕಂಡಕ್ಟರ್ ಪವಾಡಸದೃಶವಾಗಿ ಪಾರಾದರು.