Sunday, March 8, 2026
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಬಸ್‌ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್‌ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್‌ ಬಾಟಲಿಗಳ ಬಾಕ್ಸ್‌ಗಳು ಇದ್ದ ಕಾರಣ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್‌ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ.

ಅದರಲ್ಲೂ ಕರ್ನೂಲ್‌ನಲ್ಲಿ ಖಾಸಗಿ ಬಸ್‌ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್, ವಸ್ತುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಾಮಾನುಗಳ ಸಾಗಾಟಕ್ಕೆ ಅವಕಾಶ ಇಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚಿತ್ರದುರ್ಗದಲ್ಲಿ ದುರಂತಕ್ಕೆ ಒಳಗಾದ ಬಸ್‌ಗಳಲ್ಲಿ ಹೆಚ್ಚು ಲಗೇಜ್ ಇದ್ದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇದೆ. 2013ರಲ್ಲಿ ನಾನು ಸಾರಿಗೆ ಸಚಿವನಾಗುದ್ದಾಗ ಹಾವೇರಿಯಲ್ಲೂ ಇದೇ ರೀತಿ ಅಪಘಾತ ಆಗಿತ್ತು. ಆಗ ಎಮರ್ಜೆನ್ಸಿ ಎಕ್ಸಿಟ್ ಇರಲಿಲ್ಲ, ಲಕ್ಷುರಿ ಬಸ್ಸುಗಳಲ್ಲೂ ಗ್ಲಾಸ್ ಒಡೆದು ಹೊರಗಡೆ ಬರಬೇಕಾದ ಪರಿಸ್ಥಿತಿ ಇತ್ತು. ಈಗ ಸಾರಿಗೆ ಇಲಾಖೆಯ 25,000 ಬಸ್ಸುಗಳು ಸೇರಿ ಎಲ್ಲಾ ಖಾಸಗಿ ಮತ್ತು ಶಾಲಾ ಬಸ್ಸುಗಳಿಗೆ ಎಮರ್ಜೆನ್ಸಿ ಎಕ್ಸಿಟ್ ಇದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು

ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್‌ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯ ಲಗೇಜ್‌ಗಳನ್ನು ಸಾಗಣೆ ಮಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.