Sunday, March 8, 2026
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಮಾಹಿತಿ ಆಯೋಗಕ್ಕೆ ಶ್ರೀಲಂಕಾ ಪತ್ರಕರ್ತರ ನಿಯೋಗ ಭೇಟಿ-ಕಹಳೆ ನ್ಯೂಸ್

ಬೆಂಗಳೂರು: ಶ್ರೀಲಂಕಾ ಪತ್ರಕರ್ತರ  ನಿಯೋಗ ಕರ್ನಾಟಕ ಮಾಹಿತಿ ಆಯೋಗಕ್ಕೆ ಭೇಟಿ ನೀಡಿ ರಾಜ್ಯ ಮಾಹಿತಿ ಆಯುಕ್ತರೊಂದಿಗೆ ಸಂವಾದ ನಡೆಸಿತು. ಕರ್ನಾಟಕ ಪ್ರವಾಸದಲ್ಲಿರುವ ನಿಯೋಗ, ಮಾಹಿತಿ ಆಯೋಗಕ್ಕೆ ಸೌಹಾರ್ದಯುತವಾಗಿ ಭೇಟಿ ಹಲವು ವಿಷಯಗಳ ಮೇಲೆ ಚರ್ಚೆ ನಡೆಸಿತು.

ಕರ್ನಾಟಕದಲ್ಲಿ ಮಾಹಿತಿ ಆಯೋಗ ಕಳೆದ ಎರಡು ದಶಕಗಳಲ್ಲಿ ಹೇಗೆ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಪ್ರಭಾರಿ ಮುಖ್ಯ ಮಾಹಿತಿ ಆಯುಕ್ತ ಕೆ.ರಾಮನ್, ಆಯುಕ್ತರಾದ ಬದ್ರುದ್ದೀನ್ ಕೆ, ರಾಜಶೇಖರ್, ರುದ್ರಣ್ಣ ಹರ್ತಿಕೋಟೆ, ಡಾ ಮಮತಾ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಲಂಕಾದಲ್ಲಿ ಕಳೆದ 3 ವರ್ಷಗಳಿಂದ ಮಾಹಿತಿ ಹಕ್ಕು ಆಯೋಗ (ಆರ್‌ಟಿಐ) ಪ್ರಾರಂಭವಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷರ ಮಾಧ್ಯಮ ಮಾಜಿ ಕಾರ್ಯದರ್ಶಿ ನಿಶ್ಚಿನಾಂತು ಆಲ್ವೀಸ್ ಹಾಗೂ ಹಿರಿಯ ಪತ್ರಕರ್ತ ಪಾತುಮ್ ಪಾಸ್ಕೂಲ್ ತಿಳಿಸಿದರಲ್ಲದೇ, ಕರ್ನಾಟಕ ಮಾಹಿತಿ ಆಯೋಗದಿಂದ ಸಾಕಷ್ಟು ವಿಚಾರಗಳನ್ನು ಅರಿತು ಶ್ರೀಲಂಕಾದಲ್ಲಿ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿದರು. ಕರ್ನಾಟಕ ಮಾಹಿತಿ ಆಯೋಗದ ಕಾರ್ಯನಿರ್ವಹಣೆ ಬಗ್ಗೆ ಶ್ರೀಲಂಕಾ ಪತ್ರಕರ್ತರ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ಜಾಹೀರಾತು
ಜಾಹೀರಾತು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಪತ್ರಕರ್ತರ ಸಂಘದ ಹೋರಾಟ ಕಾರಣದಿಂದ ಪತ್ರಕರ್ತರಿಗೆ ಬಸ್ ಪಾಸ್, ಮಾಸಾಶನ ಸೇರಿದಂತೆ ಹಲವು ಸೌಲಭ್ಯ ಕಲ್ಪಿಸಿದೆ ಎನ್ನುವ ಮಾಹಿತಿಯನ್ನು ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶ್ರೀಲಂಕಾ ನಿಯೋಗ, ಶ್ರೀಲಂಕಾದಲ್ಲಿ ಸರ್ಕಾರದಿಂದ ಪತ್ರಕರ್ತರಿಗೆ ಯಾವುದೇ ಸೌಲಭ್ಯಗಳು ಲಭ್ಯವಿಲ್ಲ. ಆದರೆ, ಶ್ರೀಲಂಕಾದಲ್ಲಿ ಮಾಧ್ಯಮ ಮೇಲೆ ಸರ್ಕಾರ ಯಾವುದೇ ನಿಯಂತ್ರಣವನ್ನು ಹೊಂದಿಲ್ಲ. ಸ್ವತಂತ್ರವಾಗಿ ಮಾಧ್ಯಮ ಕಾರ್ಯ ನಿರ್ವಹಣೆ ಮಾಡುತ್ತಿವೆ ಎಂದು ಹೇಳಿದರು. 

ಹಿರಿಯ ಪತ್ರಕರ್ತರಾದ ಸಂಜೀವ ಥಿಸೆರಾ, ಹೇಮಂತ ಕುಮಾರಸಿಂಘೆ, ತುಷಾರ ಹೆಟ್ಟಿಯಾರಾಚ್ಚಿ, ಸಿ.ಎ.ದಮ್ಸಿರಿ ಅಜಿತ್ ಅವರು ಶ್ರೀಲಂಕಾ ನಿಯೋಗದಲ್ಲಿದ್ದರು.