Saturday, March 7, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ವೃತ್ತಿಜೀವನದ ಏಳುಬೀಳುಗಳನ್ನು ಸಹಸಿಕೊಂಡು ಮುನ್ನಡೆಯಲು ನೃತ್ಯ ಸಂಗೀತದಂತಹ ಕಲೆಗಳು ನೆರವಾಗುತ್ತವೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಹಪ್ರಾಧ್ಯಾಪಕರಾದ ಮಾಧವ ಎಂ.ಕೆ. ಹೇಳಿದರು.
ಅವರು ಇತ್ತೀಚೆಗೆ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಕ್ಕಳನ್ನು ದೂರ ಇಡುವುದಕ್ಕೆ ಈ ಕಲಾಪ್ರಕಾರಗಳು ನೆರವಾಗುತ್ತವೆ. ಅಲ್ಲದೆ ಡಿಪ್ರೆಷನ್‌ ಮುಂತಾದ ಅನೇಕ ರೀತಿಯ ಸಮಸ್ಯೆಗಳಿಗೆ ಸಂಗೀತ ನೃತ್ಯದಂತಹ ಕಲಾಪ್ರಕಾರಗಳು ಔಷಧಿಯಂತೆ ಕಾರ್ಯನಿರ್ವಹಿಸುತ್ತವೆ. ವೇಗವಾಗಿ ಸಾಗುತ್ತಿರುವ ಈ ಕಾಲಮಾನದಲ್ಲಿ ಜೀವನ ಸೌಂದರ್ಯದ ಆಸ್ವಾದನೆಗೆ ಈ ರೀತಿಯ ಹವ್ಯಾಸಗಳು ಸದಾ ಸಹಕಾರಿ ಆಗಿರುತ್ತವೆ ಎಂದು ಹೇಳಿದರು.
ಸಮಾರಂಭದಲ್ಲಿ 2024–2025 ನೇ ಸಾಲಿನಲ್ಲಿ ಮೈಸೂರಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ವತಿಯಿಂದ ನಡೆದ ಜೂನಿಯರ್‌ ಮತ್ತು ಸೀನಿಯರ್‌ ಗ್ರೇಡ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ಪ್ರದಾನ ಮಾಡಲಾಯಿತು. ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ ಅವರು ಸ್ವಾಗತಿಸಿದರು. ನೃತ್ಯಗುರುಗಳಾದ ವಿದುಷಿ ಶಾರದಾಮಣಿ ಶೇಖರ್‌ ಮತ್ತು ವಿದುಷಿ ಶ್ರೀಲತಾ ನಾಗರಾಜ್‌ ಅವರ ಶಿಷ್ಯರಿಂದ ‘ನೃತ್ಯೋತ್ಸವ’ ಕಾರ್ಯಕ್ರಮ ಪ್ರಸ್ತುತಗೊಂಡಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು