Friday, April 24, 2026
ದೆಹಲಿರಾಜ್ಯಸುದ್ದಿ

2026ರ ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ಶುಭಾಶ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಎಲ್ಲರಿಗೂ 2026ರ ಹೊಸ ವರ್ಷದ ಶುಭಾಶಯಗಳು. ​ಈ ವರ್ಷವು ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ತರಲಿ. ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನೆರವೇರಲಿ ಎಂದು ಹಾರೈಸುತ್ತೇನೆ. ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷ ನೆಲೆಸಲಿ ಎಂದು ಪ್ರಾರ್ಥಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೊಸ ವರ್ಷದ ಈ ಸಂಭ್ರಮದ ಸಂದರ್ಭದಲ್ಲಿ, ದೇಶ ಮತ್ತು ವಿದೇಶಗಳಲ್ಲಿರುವ ಎಲ್ಲಾ ಭಾರತೀಯರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.