ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಇಲಾಖೆಯು ಈಗಾಗಲೇ ಚಾಲ್ತಿಯಲ್ಲಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಿ, ಮೊಬೈಲ್ ಆಧಾರಿತ ಹಾಜರಾತಿಯ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಮೂಲಕ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಾತಿ ನೀಡಬೇಕೆಂದು ಎಂದು ಸೂಚಿಸಿದೆ.














