Saturday, March 7, 2026
ಬೆಂಗಳೂರುರಾಜ್ಯಸುದ್ದಿ

ಬಳ್ಳಾರಿಯಲ್ಲಿ ‘ಜನಾರ್ಧನ ರೆಡ್ಡಿ’ ಮನೆ ಎದುರು ಗಲಾಟೆ ಕೇಸ್ : ಕಠಿಣ ಕ್ರಮಕ್ಕೆ ‘CM ಸಿದ್ದರಾಮಯ್ಯ’ ಸೂಚನೆ – ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ, ಘರ್ಷಣೆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ.ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಡಿಜಿ-ಐಜಿಪಿ ಡಾ.ಸಲೀಂ ಅವರಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹಾಳಾಗಬಾರದು. ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು, ಸೋಮಶೇಖರ್ ರೆಡ್ಡಿ, ಆಲಿಖಾನ್, ದಮ್ಮೂರು ಶೇಖರ್ ಸೇರಿದಂತೆ 11 ಜನರ ವಿರುದ್ಧ ಕೇಸ್ ದಾಖಲಾಗಿದೆ.

ವಾಲ್ಮೀಕಿ ಪ್ರತಿಮೆ ಅನಾವರಣದ ಕಾರ್ಯಕ್ರಮದ ಬ್ಯಾನರ್ ಹರಿದ ವಿಚಾರಕ್ಕೆ ಕೇಸು ದಾಖಲಾಗಿದೆ. ಜನಾರ್ದನ ರೆಡ್ಡಿ, ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಜನಾರ್ದನ ರೆಡ್ಡಿ ಬ್ಯಾನರ್ ಹರಿಸಿದ್ದಾರೆ ಎಂದು ಬಳ್ಳಾರಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.