ಮಾರ್ಚ್ ತಿಂಗಳಿನಲ್ಲಿ ರಾಜ್ಯ ಸರ್ಕಾರದ ‘ಬಜೆಟ್’ ಮಂಡನೆ : ಸಚಿವ ಸತೀಶ್ ಜಾರಕಿಹೊಳಿ – ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ ತಿಂಗಳಿನಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ‘ ಬಜೆಟ್ ಪೂರ್ವಭಾವಿ ಸಭೆ ವಿಳಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಫೆಬ್ರವರಿ ತಿಂಗಳಿನಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದರು.
ಬಳ್ಳಾರಿ ಗಲಾಟೆ ಕುರಿತು ಮಾತನಾಡಿದ ಸಚಿವರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಫೈರಿಂಗ್ ನಡೆದಿದೆ. ಘಟನೆಯ ಬಗ್ಗೆ ತನಿಖೆ ನಡೆಸಿದರೆ ಸತ್ಯಾಂಶ ಗೊತ್ತಾಗುತ್ತದೆ. ಯಾರು..? ಏಕೆ ಗಲಾಟೆ ಮಾಡಿದರು ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ ಎಂದರು.
ಬಜೆಟ್ ಮಂಡನೆ ಬಗ್ಗೆ ಸಿಎಂ ಪ್ರತಿಕ್ರಿಯೆ
ಈ ತಿಂಗಳಿನಿಂದಲೇ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಲ್ಲಾ ಇಲಾಖೆಗಳ ಜೊತೆ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಿ, ಇಲಾಖಾವಾರು ಅಗತ್ಯ ಅನುದಾನ, ಬೇಡಿಕೆ, ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಬಜೆಟ್ ಪೂರ್ವಭಾವಿ ಸಭೆ ಆರಂಭವಾದರೆ ಬಜೆಟ್ ಮಂಡನೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಂತಾಗುತ್ತದೆ.














