ಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ಉಗ್ರ ನಾಸಿರ್ ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ಎಎಸ್‌ಐ ಚಾಂದ್ ಪಾಷ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಆರೋಪ ಪಟ್ಟಿಯಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಉಲ್ಲೇಖಿಸಿದ್ದು, ಸಿಎಆರ್ ಎಎಸ್‌ಐ ಚಾಂದ್ ಪಾಷಾ, ಅನಿಸಾ ಫಾತಿಮಾ, ಡಾ.ನಾಗರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.













