Friday, April 24, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ : ಇಬ್ಬರು ಆರೋಪಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜನವರಿ 1 ರಂದು ಮುಂಜಾನೆ 1:40 ರ ಸುಮಾರಿಗೆ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೊಸ ವರ್ಷಾಚರಣೆ ಪಾರ್ಟಿ ಮುಗಿಸಿ ಕ್ಯಾಬ್ ಗಾಗಿ ಕಾಯುತ್ತಿದ್ದ ಯುವತಿಯರ ಜೊತೆ ಯುವಕರು ಅಸಭ್ಯ ವರ್ತನೆ ತೋರಿದ್ದಾರೆ. ಇದರಿಂದ ಆತಂಕಗೊಂಡ ಯುವತಿಯರು ತಕ್ಷಣವೇ ಹೊಯ್ಸಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರ ಜೊತೆ ಕೂಡ ಯುವಕರು ಕಿರಿಕ್ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರ ಮೇಲೂ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ತಂದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಆನ್ಶ್ ಮೆಹ್ತಾ ಮತ್ತು ಪರ್ವ್ ರಾಠಿ ಎಂದು ಗುರುತಿಸಲಾಗಿದೆ. ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.