Friday, April 24, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಹಾರದಿಂದ ಮಂಗಳೂರಿಗೆ ಗಾಂಜಾ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ – ಇಬ್ಬರು ಅರೆಸ್ಟ್ -ಕಹಳೆ ನ್ಯೂಸ್

ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ.

ಜ ,03 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರಿಧಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಜಪೆ ಪೊಲೀಸರು NDPS Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುತ್ತಾರೆ.