Sunday, August 2, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್ 

ಬಂದಾರು: ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಂದಾರು ಕೆಲೆಂಜಿಮಾರು ನಾಗಶ್ರೀ ಗೆಳೆಯರ ಬಳಗದ ಅಧ್ಯಕ್ಷರಾದ ಪುಷ್ಪರಾಜ್ ಗೌಡ ಕೆಲೆಂಜಿಮಾರು, ಕಾರ್ಯದರ್ಶಿ ಲೋಕೇಶ್ ಬಿ. ಬಂದಾರು, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ ಪಾಲ್ತಿಮಾರ್, ಹಾಗೂ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು