Saturday, March 7, 2026
ದೆಹಲಿರಾಜ್ಯಸುದ್ದಿ

ಮಸೀದಿಯ ಬಳಿ ಅತಿಕ್ರಮಣ ತೆರವು ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ -ಕಹಳೆ ನ್ಯೂಸ್

ವದೆಹಲಿ: ಹಳೆ ದೆಹಲಿಯಲ್ಲಿ ಮಸೀದಿಯ ಬಳಿ ಇರುವ ಅತಿಕ್ರಮಣ ತೆರವುಗೊಳಿಸಲು ಬುಧವಾರ ನಸುಕಿನ ವೇಳೆ ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಪೊಲೀಸ್ ಸಿಬಂದಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಅನಧಿಕೃತ ನಿರ್ಮಾಣಗಳನ್ನು ತೆಗೆದುಹಾಕಲು ತುರ್ಕಮನ್ ಗೇಟ್ ಪ್ರದೇಶದ ಫೈಜ್-ಎ-ಇಲಾಹಿ ಮಸೀದಿ ಬಳಿ ಬೆಳಗಿನ ಜಾವ 1 ಗಂಟೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕರಿಂದ ಐದು ಪೊಲೀಸ್ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಅತಿಕ್ರಮಣ ವಿರೋಧಿ ಕ್ರಮದ ಭಾಗವಾಗಿ 17 ಬುಲ್ಡೋಜರ್‌ಗಳನ್ನು ನಿಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು

ರಾಮಲೀಲಾ ಮೈದಾನದಲ್ಲಿರುವ ಮಸೀದಿ ಮತ್ತು ಶ್ಮಶಾನಕ್ಕೆ ಹೊಂದಿಕೊಂಡಿರುವ ಭೂಮಿಯಿಂದ ಅತಿಕ್ರಮಣಗಳನ್ನು ತೆಗೆದುಹಾಕುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ನಿರ್ಧಾರವನ್ನು ಪ್ರಶ್ನಿಸಿ ಸೈಯದ್ ಇಲಾಹಿ ಮಸೀದಿಯ ವ್ಯವಸ್ಥಾಪಕ ಸಮಿತಿ ಸಲ್ಲಿಸಿದ ಅರ್ಜಿಯ ಮೇರೆಗೆ ದೆಹಲಿ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದ್ದರೂ ತೆರವು ಪ್ರಕ್ರಿಯೆ ಮುಂದುವರೆಸಲಾಗಿದೆ.