Friday, April 24, 2026
ಬೆಂಗಳೂರುರಾಜ್ಯಸುದ್ದಿ

ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು; ಕನ್ನಡಿಗರಿಗೆ ಮೊದಲ ಆದ್ಯತೆ – ಕಹಳೆ ನ್ಯೂಸ್

ಬೆಂಗಳೂರು: ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8 ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್ನಾಟಕದಲ್ಲೇ ನೆಲೆಸಿದ್ದವರಾದರೆ ಮನೆ ನೀಡಬೇಕು.

ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿವಾದಿತ ಕೋಗಿಲು ಲೇಔಟ್ ನಿರಾಶ್ರಿತರಿಗೆ ಸರ್ಕಾರಿ ಮನೆ ಮಂಜೂರು ಮಾಡುವ ಸಂಬಂಧ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವರಾದ ಜಮೀರ್ ಅಹಮದ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಜಮೀನಲ್ಲಿ ಯಾರಿಗೋ ಹಣ ಕೊಟ್ಟು ಒತ್ತುವರಿ ಮಾಡ್ತಾರೆ ಅಂದ್ರೆ ಏನು ಹೇಳಬೇಕು. ಅಲೆಮಾರಿಗಳಿಗೆ ಭೂ ಒತ್ತುವರಿ ಅಗತ್ಯ ಇಲ್ಲ. ಅವರು ಬರ್ತಾರೆ ಹೋಗ್ತಾರೆ. ಆದ್ರೆ ಭೂ ಒತ್ತುವರಿದಾರರನ್ನು ಸಹಿಸಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಆಗಬೇಕು.

ಸರ್ಕಾರಿ ಜಮೀನಲ್ಲಿ ಶೆಡ್ ಹಾಕಿದ ಕೂಡಲೇ ಅವರಿಗೆ ಮನೆ ಕೊಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆ ಆಗುತ್ತೆ. ಸರ್ಕಾರಿ ಜಮೀನು ಒತ್ತುವರಿಗೆ ನಾವೇ ಪರೋಕ್ಷ ಕುಮ್ಮಕ್ಕು ಕೊಟ್ಟಂತಾಗುತ್ತೆ. ಎಷ್ಟೋ ಜನ ಸರ್ಕಾರಿ ಮನೆಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವಾಗ ಹೀಗೆ ಒತ್ತುವರಿದಾರರಿಗೆ ಏಕಾಏಕಿ ಮನೆ ನೀಡುವುದು ಸರಿಯಲ್ಲ. ಆದರೆ, ಕೋಗಿಲು ಕ್ರಾಸ್ ಪ್ರಕರಣದಲ್ಲಿ ಬಡವರಿಗೆ ಮಾನವೀಯತೆ ಅಡಿಯಲ್ಲಿ ಮನೆ ನೀಡಬೇಕು ನಿಜ. ಆದರೆ, ಆ ಕೆಲಸ ಕಾನೂನುಬದ್ಧವಾಗಿಯೇ ಆಗಬೇಕು.

ಇಲ್ಲಿ ಗುಡಿಸಲು ಹಾಕಿರುವವರು ಎಲ್ಲಿಂದ ಬಂದರು ಎಂಬ ಬಗ್ಗೆ ಮೊದಲು ತನಿಖೆ ಆಗಬೇಕು. ಉತ್ತರ ಪ್ರದೇಶ ಹಾಗೂ ಬಿಹಾರದ ಐದಾರು ಕುಟುಂಬಗಳೂ ಸಹ ಇಲ್ಲಿರುವ ಮಾಹಿತಿ ಇದೆ. ಆದರೆ, ಅರ್ಹರಿಗೆ ಮಾತ್ರ ಮನೆ ನೀಡಬೇಕು. ಕರ್ನಾಟಕದಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರೆ ಅಂತವರಿಗೆ ಮೊದಲ ಆದ್ಯತೆಯಾಗಿ ಮನೆ ನೀಡಲು ಪರಿಗಣಿಸಬೇಕು. ಕನ್ನಡಿಗರಾಗಿದ್ದು ಕೋಗಿಲು ಲೇಔಟ್ ನಲ್ಲಿ 5 ವರ್ಷಕ್ಕಿಂತ ಹೆಚ್ಚು ಕಾಲ ನೆಲೆಸಿದ್ದರೆ ಆದ್ಯತೆಯಾಗಿ ಪರಿಗಣಿಸಬೇಕು.

ಕೋಗಿಲು ಲೇಔಟ್ ನಿವಾಸಿಗಳಿಗೆ ₹11.20 ಲಕ್ಷದ ಬಹುಮಹಡಿ ಮನೆ ಹಂಚಿಕೆ, ಅಧಿಕಾರಿಗಳ ಮೇಲೆ ಕ್ರಮ: ಸಿದ್ದರಾಮಯ್ಯ

ಮಾತೃಭಾಷೆ ಬೇರೆ ಇದ್ದೂ ಸಹ ತಲೆಮಾರಿನಿಂದ ಕರ್ನಾಟಕದಲ್ಲಿ ವಾಸ ಇದ್ದು, ಬೆಂಗಳೂರಿಗೆ ವಲಸೆ ಬಂದಿದ್ದರೂ ಸಹ. ಮೂಲ ತಾಲೂಕು-ಊರು ಯಾವುದು ಎಂದು ತಿಳಿದು ಅಲ್ಲಿನ ವಿಎ ಹಾಗೂ ದಫೇದಾರ್ ಮೂಲಕ ಪರಿಶೀಲಿಸಿದ ನಂತರ ನಿರಾಶ್ರಿತರಿಗೆ ಮನೆ ನೀಡಬೇಕು. ವಸೀಂ ಕಾಲನಿಯವರು ಮಾತೃ ಭಾಷೆ ಬೇರೆ ಇದ್ದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್ನಾಟಕದಲ್ಲೇ ನೆಲೆಸಿದ್ದವರಾದರೆ ಮನೆ ನೀಡಬೇಕು. ಬಡವರು ಬಡವರೇ ಭಾರತೀಯರು ಭಾರತೀಯರೆ. ಆದರೆ ಕನ್ನಡಿಗರಿಗೆ ಮೊದಲ ಆದ್ಯತೆ ಎಂದು ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ.

ಕರ್ನಾಟಕದವರು ಕನ್ನಡಿಗರು ಅಲ್ಲದಿದ್ದು 5 ವರ್ಷ ಕರ್ನಾಟಕದಲ್ಲಿ ನೆಲೆಸಿದ್ದರೆ ಅಂತವರು ಬಡವರಿಗೆ 1 ಲಕ್ಷ ಮನೆ ನೀಡುವ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿ ಮನೆ ಪಡೆಯಲಿ. ಒಂದೇ ಕುಟುಂಬದವರು ಮನೆಗಾಗಿ ಎರಡು ಅರ್ಜಿ ಸಲ್ಲಿಸಿದ್ದರೆ ಒಂದು ರೇಷನ್ ಕಾರ್ಡ್ ಆಧಾರದಲ್ಲಿ ಒಂದು ಮನೆ ನೀಡಬೇಕು. ಯಾರೋ ಹೊರ ರಾಜ್ಯದವರನ್ನ ಹುಡುಕುವ ಸಲುವಾಗಿ ಕನ್ನಡಿಗರಿಗೆ ಮನೆ ನೀಡಲು ತಡ ಮಾಡುವುದು ಸರಿಯಲ್ಲ. ಅರ್ಹರಿಗೆ ಮೊದಲ ಹಂತದಲ್ಲಿ ಮನೆ ನೀಡಲು ಆರಂಭಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಪಕೀರ್ ಕಾಲೋನಿಯಲ್ಲಿ 35 ಮನೆ ಇದ್ದು ಬಹುಪಾಲು ಜನ ಅರ್ಹರಿದ್ದಾರೆ. ಈ ಪೈಕಿ ಗುರುವಾರದ ಒಳಗೆ 25 ರಿಂದ 30 ಜನರಿಗೆ ಮನೆ ನೀಡಬೇಕು. ಉಳಿದವರಿಗೆ ಎಲ್ಲಾ ಅರ್ಹರಿಗೂ ಹಂತ ಹಂತವಾಗಿ ಮನೆ ನೀಡುವ ಕೆಲಸ ಆಗಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವರಾದ ಜಮೀರ್ ಅಹಮದ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಿರ್ಮಾನಿಸಲಾಗಿದೆ.