Friday, April 24, 2026
ಜಿಲ್ಲೆರಾಜ್ಯಸುದ್ದಿ

ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಜೀವಬೆದರಿಕೆ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು -ಕಹಳೆ ನ್ಯೂಸ್

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರಿಗೆ ಇ-ಮೇಲ್ ಮೂಲಕ ಜೀವಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಗುರುವಾರ ರಾತ್ರಿ ರಾಜ್ಯಪಾಲರ ಅಧಿಕೃತ ಇ-ಮೇಲ್ ಐಡಿಗೆ ಸಂದೇಶ ಕಳುಹಿಸಿದ್ದ ಈ ವ್ಯಕ್ತಿ, ರಾಜ್ಯಪಾಲರನ್ನು ‘ಬಾಂಬ್ ಹಾಕಿ ಸ್ಫೋಟಿಸುವುದಾಗಿ’ ಬೆದರಿಕೆ ಹಾಕಿದ್ದನು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಚ್ಚರಿಯ ವಿಷಯವೆಂದರೆ, ಆರೋಪಿಯು ಇ-ಮೇಲ್‌ನಲ್ಲಿ ತನ್ನ ಮೊಬೈಲ್ ಸಂಖ್ಯೆಯನ್ನು ಸಹ ನಮೂದಿಸಿದ್ದನು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಯ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಗಿಗೊಂಡ ಭದ್ರತೆ
ರಾಜ್ಯಪಾಲರಿಗೆ ಬೆದರಿಕೆ ಬಂದ ಬೆನ್ನಲ್ಲೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಸಿ.ವಿ. ಆನಂದ ಬೋಸ್ ಅವರು ಈಗಾಗಲೇ ‘ಜೆಡ್ ಪ್ಲಸ್’ (Z+) ಕೆಟಗರಿ ಭದ್ರತೆಯನ್ನು ಹೊಂದಿದ್ದು, ಪ್ರಸ್ತುತ ಅವರ ರಕ್ಷಣೆಗಾಗಿ ಸುಮಾರು 60 ರಿಂದ 70 ಕೇಂದ್ರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

“ಬಂಧಿತ ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈತ ಕೇವಲ ಕಿಡಿಗೇಡಿತನಕ್ಕೆ ಈ ರೀತಿ ಮಾಡಿದ್ದಾನೆಯೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಸಂಚು ಇದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.