Saturday, March 7, 2026
ಜಿಲ್ಲೆರಾಜ್ಯಸುದ್ದಿ

ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ತೆರಳಿದ್ದ ಬೆಂಗಳೂರಿನ ಮಹಿಳೆ ಸಾವು -ಕಹಳೆ ನ್ಯೂಸ್

ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಆಗಮಿಸಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ತಕ್ಷಣ 108 ಆಂಬುಲೆನ್ಸ್‌ಗೆ ಕರೆ ಮಾಡಿದರೂ ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಕುಮಟಾದಿಂದ ಖಾಸಗಿ ಅಂಬುಲೆನ್ಸ್ ಕರೆಸಿ ಚಿಕಿತ್ಸೆಗೆ ಕರೆದೊಯ್ಯುವ ವೇಳೆ ಮಹಿಳೆ ಅಸುನೀಗಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು