
ಬೆಂಗಳೂರು: ಜನವರಿ 18 ರಂದು ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಿಗದಿಯಾಗಿದ್ದ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರವಾಸವನ್ನು ರದ್ದುಗೊಳಿಸಲಾಗಿದೆ.
ಬೆಂಗಳೂರು ಹಾಗೂ ನವದೆಹಲಿಯಲ್ಲಿ ಅಧಿಕೃತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸಿಎಂ ಅವರ ಈ ಪ್ರವಾಸ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಸಿಎಂ ತವರು ಕ್ಷೇತ್ರದಲ್ಲೇ ಮಹಿಳಾ ಅಧಿಕಾರಿಗೆ ಧಮ್ಕಿ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ನಾಯಕರ ಜೊತೆಗಿನ ಸರಣಿ ಸಭೆ ಹಾಗೂ ಮನರೇಗಾ ಮರುಜಾರಿ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧದ ಅಭಿಯಾನದ ಜೊತೆಗೆ ಜ. 22ರಿಂದ ಆರಂಭವಾಗುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗವಹಿಸಬೇಕಾಗಿದೆ.














