ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ; ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ.
ಪ್ರಕರಣದ ಆರೋಪಿ, ಕುಸುಮಾವತಿ ತಮ್ಮ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು.
ಬೆಂಗಳೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು, ಹೆಗ್ಗಡೆಯವರ ಕುಟುಂಬದ ವಿರುದ್ಧ ನಿಂದನೆ ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಮಹತ್ವದ ಅದೇಶ ಮಾಡಿದೆ.
ಪ್ರಕರಣದ ಆರೋಪಿ, ಕುಸುಮಾವತಿ ತಮ್ಮ ವಿಠ್ಠಲ ಗೌಡ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಕುಟುಂಬದ ಅವಹೇಳನಕಾರಿಯಾಗಿ ಮಾತನಾಡದಂತೆ ಪ್ರತಿಬಂಧಕ ಆಜ್ಞೆಯನ್ನು ನ್ಯಾಯಾಲಯ ಮಾಡಿತ್ತು. ಈ ಅದೇಶವನ್ನು ಉಲ್ಲಂಘಿಸಿದ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ವಿಠ್ಠಲ ಗೌಡನಿಗೆ 30 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಆದೇಶ ಮಾಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಖ್ಯಾತ ನ್ಯಾಯವಾದಿ ರಾಜಶೇಖರ್ ಹಿಲ್ಯಾರ್ ವಾದ ಮಂಡನೆ ಮಾಡಿದರು.














