Sunday, March 8, 2026
ಜಿಲ್ಲೆಸುದ್ದಿಹಾಸನ

ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್ – ಕಹಳೆ ನ್ಯೂಸ್

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ, ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜ.17ರಂದು ಹಾಸನದ 80 ಅಡಿ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿದ್ದ ಬಾಲಕಿ ಗಾಬರಿಯಲ್ಲೇ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು. ಬಳಿಕ ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿನೋಡಿ ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಾಹೀರಾತು
ಜಾಹೀರಾತು

ಘಟನೆ ನಡೆದ ಮೂರು ದಿನಗಳ ಬಳಿಕ ಆಗಂತುಕನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.