ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಸಜೀವ ದಹನ : ಪ್ರೀ ಪ್ಲ್ಯಾನ್ಡ್ ಮರ್ಡರ್ ಅಂತ ಕುಟುಂಬ ಆರೋಪ- ಕಹಳೆ ನ್ಯೂಸ್

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಸರಣಿ ಹತ್ಯೆ ಮುಂದುವರಿದಿದೆ. ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ವ್ಯಕ್ತಿಯನ್ನ ಗ್ಯಾರೇಜ್ ಒಳಗೇ ಸುಟ್ಟುಹಾಕಲಾಗಿದೆ. ಆದ್ರೆ ಇದು ಪೂರ್ವನಿಯೋಜಿತ ಕೃತ್ಯ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳು ಹೇಳುವಂತೆ, ಶುಕ್ರವಾರ ತಡರಾತ್ರಿ ಚಂಚಲ್ ಗ್ಯಾರೇಜ್ ಒಳಗೆ ಮಲಗಿದ್ದಾಗ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಗ್ಯಾರೇಜ್ನ ಶಟರ್ಗೆ ಹೊರಗಿನಿಂದಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ಬಹುಬೇಗನೆ ವ್ಯಾಪಿಸಿದ್ದರಿಂದ ಚಂಚಲ್ ಅಂಗಡಿಯೊಳಗೇ ಸಜೀವ ದಹನವಾಗಿದ್ದಾರೆ.
ಘಟನೆ ಬಳಿಕ ದಾಳಿಕೋರರು ಗ್ಯಾರೇಜ್ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದೃಶ್ಯ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನೂ ಘಟನೆ ಪೂರ್ವ ನಿಯೋಜಿತ ಕೃತ್ಯ ಎಂದು ಕುಟುಂಸ್ಥರು ಆರೋಪಿಸಿದ್ದಾರೆ. ದಾಳಿಕೋರರನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ. ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಚಂಚಲ್ ಹತ್ಯೆಗೆ ನಿಖರ ಕಾರಣ ಪತ್ತೆಹಚ್ಚಲು ಮುಂದಾಗಿದ್ದಾರೆ.













