ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ; ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಉದ್ಘಾಟನೆ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ಭಾನುವಾರ ಮಂಗಳೂರಿನ ಕದ್ರಿ ಹಿಲ್ಸ್ ಬಳಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆಯಿತು.
ಸಂಘದ ಸದಸ್ಯರು ಅತ್ಯಂತ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬ್ಯಾಟಿಂಗ್ ಮಾಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕೆ.ಪಿ.ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಕೋರಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್.ಬಿ.ಎನ್. ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಕೆ.ಪೂಜಾರಿ, ಉಪಾಧ್ಯಕ್ಷ ವಿಲೈಡ್ ಡಿಸೋಜಾ ಉಪಸ್ಥಿತರಿದ್ದರು.









