Thursday, July 23, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮದ್ಯಪಾನ ಮಾಡಿ ಅಪಘಾತ ಸಾವು ಸಂಭವಿಸಿದರೆ ‘ಶಿಕ್ಷಾರ್ಹ ನರಹತ್ಯೆ’ ಕಾನೂನಿನಡಿ ಶಿಕ್ಷೆ : ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ -ಕಹಳೆ ನ್ಯೂಸ್

ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ನಗರದ ಕುದ್ಮುಲ್‌ ರಂಗರಾವ್ ಪುರಭವನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್‌ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು