Saturday, March 7, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜ.29ಕ್ಕೆ ಕೆಎಸ್‌ಆರ್‌ಟಿಸಿ ಮುಷ್ಕರ: ‘ನೋ ವರ್ಕ್ ನೋ ಪೇ’ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಜ.29ರಂದು ‘ಬೆಂಗಳೂರು ಚಲೋ’ ಮುಷ್ಕರಕ್ಕೆ ಕರೆ ನೀಡಿದೆ.

ಆದರೆ, ಇದಕ್ಕೆ 1 ದಿನ ಮೊದಲೇ (ಮಂಗಳವಾರ) ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು ಕೆಎಸ್‌ಆರ್‌ಟಿಸಿ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಜ.29 (ಗುರುವಾರ) ಕರ್ತವ್ಯಕ್ಕೆ ಬಂದಿಲ್ಲ ಅಂದರೆ ‘ನೋ ವರ್ಕ್ ನೋ ಪೇ’ ಎನ್ನುವ ಆದೇಶ ಜಾರಿ ಮಾಡಿದೆ.

ಜಾಹೀರಾತು
ಜಾಹೀರಾತು

ಅನಿವಾರ್ಯ ಬಿಟ್ಟು ಯಾವುದೇ ರೀತಿಯ ರಜೆ ಮಂಜೂರು ಮಾಡಬಾರದು. ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆ ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಬೇಕು. ಗುರುವಾರ ಡ್ಯೂಟಿಗೆ ಬರದಿದ್ದರೆ ‘ನೋ ವರ್ಕ್ ನೋ ಪೇ’ ಜತೆಗೆ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತಾ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.