Recent Posts

Saturday, April 25, 2026
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ : ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಗತ್ಯ ಅನುದಾನವನ್ನು ಒದಗಿಸುವಂತೆ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು.

ಶಾಸಕರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಬೆಳ್ತಂಗಡಿ ತಾಲೂಕಿನ 14 ವಿವಿಧ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಟ್ಟಡ ದುರಸ್ತಿ ಹಾಗೂ ಶೌಚಾಲಯಗಳ ಅಭಿವೃದ್ಧಿಗಾಗಿ ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಅನುದಾನದಿಂದ ಶಾಲೆಗಳ ಮೂಲಭೂತ ಸೌಕರ್ಯಗಳು ಮತ್ತಷ್ಟು ಸುಧಾರಣೆಯಾಗಲಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಶಿಕ್ಷಣ ವಾತಾವರಣ ಕಲ್ಪಿಸಲು ಸಹಕಾರಿಯಾಗಲಿದೆ.

ಶಾಸಕರ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಶಿಕ್ಷಣ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕ ಶ್ರೀ ಹರೀಶ್ ಪೂಂಜ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.