Friday, March 6, 2026
ಬೆಂಗಳೂರುರಾಜ್ಯಸುದ್ದಿ

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬೆಂಗಳೂರು ಜಲಮಂಡಳಿ ಪೈಪ್‌ಲೈನ್‌ನ ಚೇಂಬರ್‌ನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ. ರಜನಿಕಾಂತ್‌ ಕುಟುಂಬ ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಕಳೆದ ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದು, ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್‌ನಲ್ಲಿ ಶವ ಪತ್ತೆಯಾಗಿದೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಜಾಹೀರಾತು
ಜಾಹೀರಾತು

ಕಳೆದ ಹಲವು ದಿನಗಳಿಂದ ಸಂಪನ್ನು ಜಲಮಂಡಳಿ ಮುಚ್ಚದೇ ಬಿಟ್ಟಿದ್ದು, ಬಾಲಕ ಓಡಾಡುವ ವೇಳೆ ಸಂಪ್‌ಗೆ ಬಿದ್ದು ಸಾವನ್ನಪ್ಪಿದ್ದಾನೆ. ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್‌ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.