ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು : ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ.
ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ ಸಂಪತ್ತಿಗೆ ತೀವ್ರವಾದ ಹಾನಿಯಾಗುವ ಆತಂಕ ಎದುರಾಗಿದೆ
ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.














