Friday, March 6, 2026
ಜಿಲ್ಲೆದೆಹಲಿರಾಜ್ಯಸುದ್ದಿ

ಬೆಂಗಳೂರು ಮತ್ತು ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ – ಕಹಳೆ ನ್ಯೂಸ್

ನವದೆಹಲಿ: ಇತ್ತಿಚೀನ ಕೇಂದ್ರ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈಸ್ಪೀಡ್ ರೈಲು ಕಾರಿಡಾರ್ ಅನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣ ಮಾಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ.

ಸಂಸತ್ ಭವನದಲ್ಲಿ ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜೋಶಿ ಅವರು, ಬೆಂಗಳೂರು-ಪುಣೆ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಅಪ್ಪ, ಅಮ್ಮ ಕ್ಷಮಿಸಿ – ಆತ್ಮಹತ್ಯೆಗೂ ಮುನ್ನ ಸಹೋದರಿಯರು ಬರೆದಿದ್ದ ಡೆತ್ ನೋಟ್ ಪತ್ತೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೇ ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ. ಹಾಗಾಗಿ ಇದೊಂದು ಹೊಸ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ. ಜೋಶಿ ಅವರ ಮನವಿಗೆ ರೈಲ್ವೆ ಸಚಿವರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು