ಸಿಗರೇಟ್ ಸೇದುತ್ತಾ ವಿಲನ್ ಲುಕ್ನಲ್ಲಿ ಫೋಟೋ ಶೂಟ್ : ಮತ್ತೆ ವಿವಾದಕ್ಕೆ ಸಿಲುಕಿದ ಬಿಗ್ ಬಾಸ್ ಸ್ಪರ್ಧಿ ರಜತ್ – ಕಹಳೆ ನ್ಯೂಸ್


ಮೈಸೂರು: ಸಾರ್ವಜನಿಕವಾಗಿ ಮಚ್ಚು ಹಿಡಿದು ರಿಲ್ಸ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ ಈಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ವಿಲನ್ ಲುಕ್ನಲ್ಲಿ ಸಿಗರೇಟ್ ಸೇದುತ್ತಾ ಕಾರಿನಿಂದ ಇಳಿಯುವ ಫೋಟೋ ಶೂಟ್ ವಿಡಿಯೋವನ್ನು ಇನ್ಸ್ಟಾದಲ್ಲಿ ಅಪ್ಲೋಡ್ ಮಾಡಲಾಗಿದೆ.