Friday, March 13, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು  : ನಗರದ ಪಚ್ಚನಾಡಿ ಪ್ರದೇಶದ ರೈಲ್ವೇ ಹಳಿಯ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ.

ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣ ತನಿಖೆಯ ನಂತರವೇ ತಿಳಿದುಬರಲಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂಬಂಧಿತ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು