Sunday, March 8, 2026
ಸುದ್ದಿ

ಕೆಂಪೇಗೌಡ ಏರ್ಪೋರ್ಟ್ ನಲ್ಲಿ 2.97 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ, ಮೂವರು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಥಾಯ್ಲೆಂಡ್​ನ ಪುಕೆಟ್​ ಹಾಗೂ ಮಲೇಶಿಯಾದಿಂದ ಕೆಐಎಬಿಗೆ ಆಗಮಿಸಿದ್ದ ಮೂವರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳನ್ನು ಇಮಿಗ್ರೇಷನ್​ ವಿಭಾಗದಲ್ಲಿ ಪರಿಶೀಲಿಸಿದಾಗ, ಪ್ಯಾಕೆಟ್‌ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 ಕೆ.ಜಿ ಹೈಡ್ರೋಪೋನಿಕ್​ ಗಾಂಜಾ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು, ಪ್ರತ್ಯೇಕ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಜಾಲ ಬಯಲಾಗಿದ್ದು, ₹53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ವ್ಯಕ್ತಿಯೊಂದಿಗೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು