Friday, April 24, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ.15ರಂದು ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕರೋಪಾಡಿಯ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15ರಂದು ಮಹಾಶಿವರಾತ್ರಿ ಉತ್ಸವ ಶಿವಾರ್ಪಣಂ ಕಾರ್ಯಕ್ರಮವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ಮಂಗಳೂರು ಗುರುಪುರ ಶ್ರೀವಜ್ರದೇಹಿ ಮಠದ ಪರಮಪೂಜ್ಯ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯವನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಖ್ಯಾತ ಹಿರಿಯ ವಕೀಲರಾದ ಶ್ರೀ ಶ್ಯಾಮಸುಂದರ್ ಎಂ. ಎಸ್., ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರು ಹಾಗೂ ಪದ್ಯಾಣ ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ಪಟ್ಲ ಸತೀಶ ಶೆಟ್ಟಿ ಯವರು ಭಾಗವಹಿಸಲಿದ್ದಾರೆ. ಬಳಿಕ 11.00 ಗಂಟೆ ಶ್ರೀದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶ ಕಾರ್ಯಕ್ರಮದ ಪೂರ್ವಭಾವಿ ಸುಧರ್ಮ ಸಭೆಯು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು