Friday, March 13, 2026
ಸುದ್ದಿ

ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ : ಹಿಂಬದಿ ವಾಹನ ಸವಾರನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಓಮ್ನಿ ಚಾಲಕ – ಕಹಳೆ ನ್ಯೂಸ್

ಉಳ್ಳಾಲ : ಚಲಿಸುತ್ತಿದ್ದ ಓಮ್ಮಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಓಮ್ಮಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ರಾ.ಹೆ 66 ರ ಕೋಟೆಕಾರು ಅಡ್ಡ ಎಂಬಲ್ಲಿ ನಡೆದಿದೆ.

ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿಗೊಳಿಸಲಾಗಿದ್ದ ತನ್ನ ಓಮ್ಮಿ ಕಾರನ್ನ ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಕಾರಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಹತ್ತಿದ ವಿಚಾರ ರಿಯಾಝ್ ಅವರ ಗಮನಕ್ಕೆ ಬಂದಿಲ್ಲ. ಈ ವೇಳೆ ಹಿಂಬದಿ ವಾಹನ ಸವಾರರೋರ್ವರು ರಿಯಾಝ್ ಅವರಲ್ಲಿ ಕಾರಲ್ಲಿ ಬೆಂಕಿ ಹಚ್ಚಿಕೊಂಡಿರುವ ವಿಚಾರ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು