
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಕೆಲ ದಿನಗಳ ಹಿಂದಷ್ಟೇ ದೆಹಲಿಯ ಒಂಭತ್ತು ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿತ್ತು.
ಇದೀಗ ಮತ್ತೆ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬೆಳಿಗ್ಗೆ 9;13ರ ಸುಮಾರಿಗೆ ಜಾಂದೇವಾಲನ್ ನಲ್ಲಿರುವ ಬಿಡಿ ತಮಿಳ್ ಎಜುಕೇಷನ್ ಸ್ಕೂಲ್ ಗೆ ಬಾಂಬೆ ಬೆದರಿಕೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಶಾಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಇದೇ ವೇಳೆ ದೆಹಲಿಯ ಹಲವು ಶಾಲೆಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ ಎಂದು ತಿಳಿದುಬಂದಿದೆ.














