ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ- ಕಹಳೆ ನ್ಯೂಸ್

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಮೂವರ ಬಂಧನ ಮಾಡಿದ್ದಾರೆ
ಮುಸ್ತಫಾ ಸೀದಿಯಬ್ಬ, ಮೈಯದ್ದಿ, ಮೊಹಮ್ಮದ್ ಶಿಫಾನ್, ಎಂಬಾತರನ್ನು ವಶಕ್ಕೆ ಪಡೆದುಕೊಂಡು ಅವರುಗಳ ವಶದಿಂದ ರೂ.11,90,000/- ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, KA-19-MQ-3420 ನೇ ನಂಬ್ರದ ಬೂದು ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ,ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದಾರೆ














