
ಬೆಂಗಳೂರು: ಗರ್ಭಿಣಿ ಫೋಟೋ ಶೂಟ್ ವೇಳೆ ಆಟವಾಡುತ್ತಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿಡ್ಡೇನಹಳ್ಳಿಯಲ್ಲಿ ನಡೆದಿದೆ.ಎಂಟು ತಿಂಗಳ ಗರ್ಭಿಣಿ ಫೋಟೋ ಶೂಟ್ ಮಾಡುವ ವೇಳೆ ಘಟನೆ ನಡೆದಿದೆ.
ಮಗುವಿನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.














