ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ- ಕಹಳೆ ನ್ಯೂಸ್

ಉಡುಪಿ: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ.
ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ ಹಾಗೂ ಮಗಳೊಂದಿಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಾಯಿಗೆ ಹಲವು ಪೂಜೆ ಕಾರ್ಯಗಳನ್ನು ನೆರವೇರಿಸಿದ್ದಾರೆ. ಜೊತೆಗೆ ರಿಷಬ್ ಶೆಟ್ಟಿ ದೇವಿಯ ರಥವನ್ನು ಎಳೆದಿದ್ದಾರೆ.
ಸದ್ಯ ತವರಿನಲ್ಲಿ ನೆಲೆಸಿರುವ ರಿಷಬ್ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ದೇವಿಯ ದರ್ಶನ ಕೈಗೊಂಡ ಬಳಿಕ ರಿಷಬ್ ದಂಪತಿಯನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.














