
ಬೆಂಗಳೂರು: ಫೆ.28 ರಿಂದ ಮಾರ್ಚ್ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.














