Friday, March 13, 2026
ಸುದ್ದಿ

ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ -ಕಹಳೆ ನ್ಯೂಸ್

ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾವರ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಸರಕಾರದಿಂದ 65 ಲಕ್ಷ ಅನುದಾನ ಒದಗಿಸಿಕೊಟ್ಟ ಸನ್ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಇದಕ್ಕೆ ಸಹಕರಿಸಿದ ಸನ್ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಇಂದು ಅಭಿವೃದ್ಧಿ ಕಾರ್ಯಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶಾಲಿನಿ ಎಸ್, ಉಪಾಧ್ಯಕ್ಷರಾದ ಉದಯ ಆರ್ ರಾವ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಸೌಮ್ಯ , ಕಾರ್ಯದರ್ಶಿಯವರಾದ ಜಲಜಾಕ್ಷಿ, ನಿಕಟ ಪೂರ್ವ ಪಂಚಾಯತ್ ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು, ಆರೋಗ್ಯ ಕೇಂದ್ರದ ದಾದಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು