Wednesday, March 11, 2026
ಸುದ್ದಿ

ಕಾಡಾನೆ ದಾಳಿಗೆ ಮಹಿಳೆ ಬಲಿ ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ -ಕಹಳೆ ನ್ಯೂಸ್

ಚಿಕ್ಕಮಗಳೂರು: ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಇದೇ ಜಾಗದಲ್ಲಿ ಈ ಆನೆ ವಾರದ ಹಿಂದೆ ಕಾರ್ಮಿಕನೊಬ್ಬನನ್ನು ಬಲಿಪಡೆದಿತ್ತು.

ಮೃತ ಮಹಿಳೆಯನ್ನು ಹಾವೇರಿಯ ಹಾನಗಲ್ ಮೂಲದ ಬೋರಮ್ಮ (33) ಎಂದು ಗುರುತಿಸಲಾಗಿದೆ. ಕಾಡಾನೆ ಸೆರೆ ಕಾರ್ಯಾಚರಣೆ ನಡೆಯುತ್ತಿರುವ ಸಮಯದಲ್ಲೇ ಈ ದಾಳಿ ನಡೆದಿದೆ. ಕಾಡಾನೆಗೆ ಮದವೇರಿದೆ ಎಂದು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಈ ವೇಳೆ ಆನೆ ದಾಳಿ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯ ಮೃತದೇಹವನ್ನು ಆಂಬುಲೆನ್ಸ್‌ನಲ್ಲಿ ಕೊಂಡೊಯ್ದರೆ ಜನರಿಗೆ ತಿಳಿಯುತ್ತದೆ ಎಂದು ಗೂಡ್ಸ್‌ ಆಟೋದಲ್ಲಿ ಸಾಗಿಸಿದ್ದಾರೆ. ಈ ವಿಚಾರಕ್ಕೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೇಲಿಂದ ಮೇಲೆ ಸಾವಾಗ್ತಿದ್ರು ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ. ಕಾಡಾನೆ ದಾಳಿಗೆ 9 ಜನ ಬಲಿಯಾಗಿದ್ದಾರೆ. ಸತ್ತ ಬಳಿಕ ಪರಿಹಾರ ಶಾಶ್ವತವಲ್ಲ, ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು