Recent Posts

Friday, June 19, 2026
ಸುದ್ದಿ

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಧೌಲಾ ಕುವಾನ್‌ನ ಆರ್ಮಿ ಪಬ್ಲಿಕ್ ಸ್ಕೂಲ್ ಮತ್ತು ಲೋಧಿ ರಸ್ತೆಯ ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟ ಮಾಡುವ ಬೆದರಿಕೆ ಬಂದಿದೆ.

ಜಾಹೀರಾತು
ಜಾಹೀರಾತು

ಬೆದರಿಕೆ ಇ-ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಯಿತು. ಬಳಿಕ ಎರಡೂ ಶಾಲೆಗಳನ್ನು ತಕ್ಷಣವೇ ಖಾಲಿ ಮಾಡಿಸಲಾಯಿತು. ಪೊಲೀಸ್, ಬಾಂಬ್ ನಿಷ್ಕ್ರಿಯಗೊಳಿಸುವ ತಂಡ, ಡಾಗ್ ಸ್ಕ್ವಾಡ್ ಮತ್ತು ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶಾಲಾ ಆವರಣದ ಪೂರ್ಣ ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

12ನೇ ತರಗತಿ ಪರೀಕ್ಷೆಗಳು ನಡೆಯುತ್ತಿರುವ ಈ ಸಮಯದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಇಂತಹ ಬೆದರಿಕೆ ಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಸಂಶಯಾಸ್ಪದ ವಸ್ತುಗಳು ಅಥವಾ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಭದ್ರತಾ ಕಾರಣಗಳಿಂದ ಶಾಲೆಗಳನ್ನ ಮುಚ್ಚುವಂತೆ ಆದೇಶ ನೀಡಲಾಗಿದೆ.

ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಆರ್ಮಿ ಪಬ್ಲಿಕ್ ಸ್ಕೂಲ್, ಧೌಲಾ ಕುವಾನ್ ಮತ್ತು ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್, ಲೋಧಿ ರಸ್ತೆ ಎರಡಕ್ಕೂ ಇ-ಮೇಲ್ ಮೂಲಕ ಬಾಂಬ್ ಧಮಕಿ ಬಂದಿದೆ. ಮುಂ