Recent Posts

Friday, June 19, 2026
ಸುದ್ದಿ

ಬಂಟ್ವಾಳ ತಾಲೂಕು ಜನಜಾಗ್ರತಿ ವೇದಿಕೆ ಪದಾಧಿಕಾರಿಗಳ ಸಭೆ, ನೂತನ ಅಧ್ಯಕ್ಷರ ಆಯ್ಕೆ- ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗ ಸಂಸ್ಥೆಯಾದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಬಂಟ್ವಾಳ ತಾಲೂಕು ಇದರ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯು ವಿಟ್ಲ ಯೋಜನ ಕಚೇರಿ ಸಭಾಂಗಣದಲ್ಲಿ ತಾಲೂಕು ಅಧ್ಯಕ್ಷರಾದ ರೋನಾಲ್ಡ್ ಡಿಸೋಜ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.

ಜಾಹೀರಾತು
ಜಾಹೀರಾತು

ಸಭೆಯನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಯ ವಿಟ್ಲ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಉದ್ಘಾಟಿಸಿದರು. ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ.‌ವಾರ್ಷಿಕ ವರದಿ ವಾಚಿಸಿದರು. ಜಿಲ್ಲೆ 1ರ ನಿರ್ದೇಶಕ ದಿನೇಶ್ ಡಿ ಮಾತನಾಡಿ ಗ್ರಾಮ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಂಘಟನೆಯನ್ನು ಬಲಪಡಿಸೋಣ, ನವಜೀವನ ಸಮಿತಿ ಸದಸ್ಯರ ಏಳಿಗೆಗಾಗಿ ಪ್ರಯತ್ನಿಸೋಣ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆ 2 ರ ನಿರ್ದೇಶಕ ಬಾಬು ನಾಯ್ಕ ಮಾತನಾಡಿ ಮದ್ಯಮುಕ್ತ ಗ್ರಾಮವನ್ನಾಗಿ ಮಾಡಲು ನಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದರು.
ಜನಜಾಗೃತಿ ವೇದಿಕೆ ಪ್ರಾದೇಶಿ ಯೋಜನಾಧಿಕಾರಿ ಗಣೇಶ್ ಆಚಾರ್ಯ 2025-26ನೇ ಸಾಲಿನ ಕ್ರಿಯಾ ಯೋಜನೆಯ ಗುರಿ ಸಾಧನೆ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ವಿಟ್ಲ ಹಾಗೂ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ವಲಯವಾರು ಸಾಧನ ವರದಿಯನ್ನು ಮಂಡಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯವೈಖರಿಯ ಅಂಕಿ ಅಂಶಗಳು ಹಾಗೂ ಜನಜಾಗೃತಿ ಕಾರ್ಯಕ್ರಮದ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಾಯಿತು.

ವೇದಿಕೆಯಲ್ಲಿ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವಾ ಕೊಡಾಜೆ, ಕಿರಣ್ ಹೆಗ್ಡೆ ಉಪಸ್ಥಿತರಿದ್ದರು. ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು
ಅಧ್ಯಕ್ಷರಾಗಿ ರಾಜಾರಾಮ್ ಶೆಟ್ಟಿ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಕಾರಂತ್ ಆಯ್ಕೆಯಾದರು. ವಿಟ್ಲ ಯೋಜನಾಧಿಕಾರಿ ಸುರೇಶ್ ಗೌಡ ಸ್ವಾಗತಿಸಿ, ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ ವಂದಿಸಿದರು.