Recent Posts

Friday, June 19, 2026
ಸುದ್ದಿ

ಸುಳ್ಯ ತಾಲೂಕಿನಾದ್ಯಂತ ಗಾಳಿ-ಮಳೆ : ಹಲವೆಡೆ ಮರಗಳು ಉರುಳಿ ಬಿದ್ದು ಮನೆ ಹಾಗೂ ಕಟ್ಟಡಗಳಿಗೆ ವ್ಯಾಪಕ ಹಾನಿ -ಕಹಳೆನ್ಯೂಸ್

ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಬುಧವಾರ ಸಂಜೆ ಗುಡುಗು ಸಹಿತ ಗಾಳಿ-ಮಳೆಯಾಗಿದ್ದು, ಸುಳ್ಯ ಸಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಉರುಳಿ ಬಿದ್ದು ಮನೆ ಹಾಗೂ ಕಟ್ಟಡಗಳಿಗೆ ಹಾನಿಯುಂಟಾಗಿದೆ.

ಜಾಹೀರಾತು
ಜಾಹೀರಾತು

ಸುಳ್ಯ ನಗರ, ಸಂಪಾಜೆ, ಕಲ್ಲುಗುಂಡಿ, ಅರಂತೋಡು, ಬೆಳ್ಳಾರೆ, ಮಂಡೆಕೋಲು, ಅಜ್ಜಾವರ, ಎಲಿಮಲೆ, ದೊಡ್ಡತೋಟ, ಸೋಣಂಗೇರಿ ಮತ್ತು ಪೆರುವಾಜೆ ಪರಿಸರದಲ್ಲಿ ಭಾರೀ ಗಾಳಿ-ಮಳೆ ಸುರಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸುಳ್ಯದ ಗುರುಂಪು ನಿವಾಸಿ ಮುನೀರ್ ಎಂಬುವವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. ಸಂಪಾಜೆಯ ಪೆಲ್ತಡ್ಕದಲ್ಲಿ ಚಂದ್ರಾವತಿ ಎಂಬುವವರ ಮನೆಗೆ ಹಾಗೂ ಗೂನಡ್ಕದ ರಾಜ ಎಂಬುವವರ ಮನೆಯ ಮೇಲೆ ತೆಂಗಿನ ಮರಗಳು ಬಿದ್ದು ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಎಲಿಮಲೆಯಲ್ಲಿ ತೆಂಗಿನ ಮರವು ಎಲಿಮಲೆ ನೂರುಲ್ ಹುದಾ ಮದ್ರಸ ಕಟ್ಟಡದ ಮೇಲೆ ಬಿದ್ದಿದ್ದು, ಕಟ್ಟಡಕ್ಕೆ ಭಾಗಶಃ ಹಾನಿಯಾಗಿದೆ.

ಗಾಳಿಯ ವೇಗಕ್ಕೆ ತಾಲೂಕಿನ ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ. ತೋಟಗಾರಿಕಾ ಬೆಳೆಗಳಿಗೂ ಈ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಸಾಧ್ಯತೆಯಿದೆ.