Monday, March 9, 2026
ಸುದ್ದಿ

ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವ ಕಿರಣ್ ಭಟ್ ಬೈಪದವು ಆಯ್ಕೆ- ಕಹಳೆ ನ್ಯೂಸ್

ವಿಟ್ಲ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವ ಕಿರಣ್ ಭಟ್ ಬೈಪದವುರವರು ಆಯ್ಕೆಯಾಗಿದ್ದಾರೆ.

​ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವ ಕಿರಣ್ ಭಟ್ ಬೈಪದವುರವರನ್ನು ಆಯ್ಕೆ ಮಾಡಿದ್ದಾರೆ. ​ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಜಿಲ್ಲೆಯ ವಿವಿಧ ಭಾಗಗಳ ಸಕ್ರಿಯ ಕಾರ್ಯಕರ್ತರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಿವ ಕಿರಣ್ ಭಟ್ ರವರು ಈ ಭಾಗದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿರುವ ನಿಟ್ಟಿನಲ್ಲಿ ಅವರಿಗೆ ಜವಾಬ್ದಾರಿ ನೀಡಲಾಗಿದೆ‌. ಇವರು ಇಡ್ಕಿದು ಸೇವಾಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಬೈಪದವುರವರ ಪುತ್ರರಾಗಿದ್ದಾರೆ.

ಜಾಹೀರಾತು
ಜಾಹೀರಾತು