Monday, March 9, 2026
ಜಿಲ್ಲೆಮಂಡ್ಯಸುದ್ದಿ

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ : ಕತ್ತು ಹಿಸುಕಿ ಕೊಂದಿದ್ದ 2ರ ಮಗು ಅದೃಷ್ಟವಶಾತ್ ಪಾರು -ಕಹಳೆ ನ್ಯೂಸ್

ಮಂಡ್ಯ: ಕೌಟುಂಬಿಕ ಕಲಹಕ್ಕೆ 2ರ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪಾರಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ.

ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಎರಡು ವರ್ಷದ ಮಗುವಿತ್ತು. ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಇಂದು (ಮಾ.9) ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ.

ಜಾಹೀರಾತು
ಜಾಹೀರಾತು

ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಬದುಕುಳಿದಿದೆ. ಈವರೆಗೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.