Tuesday, March 10, 2026
ಸುದ್ದಿ

ಉಪ್ಪಿನಂಗಡಿ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕಾರಿಗೆ ರಿಕ್ಷಾ ಡಿಕ್ಕಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ :  ಇಲ್ಲಿನ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪುತ್ತೂರು ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ನೆಕ್ಸನ್ ಕಾರಿಗೆ ಸರ್ವಿಸ್ ರೋಡ್ ನಲ್ಲಿ ವಿರುದ್ಧ ದಿಕ್ಕಿನಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾದ ಬಗ್ಗೆ ವರದಿಯಾಗಿದೆ.

ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ಸರ್ವಿಸ್ ರೋಡ್ ಗೆ ಸಂಪರ್ಕ ಸಾಧಿಸುತ್ತಿದ್ದಂತೆ ಒನ್ ವೆ ಆಗಿರುವ ರಸ್ತೆಯಲ್ಲಿ ಶಾಲಾ ಮಕ್ಕಳನ್ನು ಕೂರಿಸಿಕೊಂಡು ಬರುತ್ತಿದ್ದ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ಎರಡು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವನಿಸಲಾಗಿದೆಯೆಂದು ಪ್ರತ್ಯಕ್ಷ ದರ್ಶಿ ಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ

ಜಾಹೀರಾತು
ಜಾಹೀರಾತು