Wednesday, March 11, 2026
ರಾಜ್ಯಸುದ್ದಿ

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು : ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ – ಕಹಳೆ ನ್ಯೂಸ್

ಇಟಾನಗರ: ಅರುಣಾಚಲ ಪ್ರದೇಶದ ಪಾಸಿಘಾಟ್‌ನ ಮೆಬೊ ಮತ್ತು ಸಿಗರ್ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ 66,000 ಲೀಟರ್ ನೀರನ್ನು ಬಳಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಕಿ ನಂದಿಸಲು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ಮಿ -17 ವಿ 5 ಹೆಲಿಕಾಪ್ಟರ್‌ನ್ನು ನಿಯೋಜಿಸಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ಫೋಟೋ ಹಾಗೂ ವಿಡಿಯೋವನ್ನು ವಾಯುಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ.

ಜಾಹೀರಾತು
ಜಾಹೀರಾತು

Mi-17 V5 ಹೆಲಿಕಾಪ್ಟರ್‌ ಬೆಂಕಿ ನಂದಿಸುವ ಕಾರ್ಯಾಚರಣೆಯ ವೀಡಿಯೋವನ್ನು ವಾಯುಪಡೆ ಹಂಚಿಕೊಂಡಿದ್ದು, ಹೆಲಿಕಾಪ್ಟರ್‌ನ ಸಾಮರ್ಥ್ಯ ಹಾಗೂ ನಿಖರವಾದ ಕಾರ್ಯವನ್ನು ಅದರಲ್ಲಿ ನೋಡಬಹುದಾಗಿದೆ. ಹಲವಾರು ಬಾರಿ ಹಾರಾಟ ನಡೆಸಿದ Mi-17 V5 ಹೆಲಿಕಾಪ್ಟರ್‌ ಬೆಂಕಿ ಹೊತ್ತಿದ್ದ ಸ್ಥಳದಲ್ಲಿ ಸುಮಾರು 66,000 ಲೀಟರ್‌ ನೀರನ್ನು ಸುರಿದಿದೆ.

ಇತ್ತೀಚೆಗೆ ಅರುಣಾಚಲ ಪ್ರದೇಶದ ವಾಲೋಂಗ್‌ನಲ್ಲಿ, ಐಎಎಫ್ ಹೆಲಿಕಾಪ್ಟರ್‌ಗಳು ಬೆಂಕಿ ಹೊತ್ತಿಕೊಂಡ ಪ್ರದೇಶದ ಮೇಲೆ 139,800 ಲೀಟರ್ ನೀರನ್ನು ಹರಿಸುವ ಮೂಲಕ ಯಶಸ್ವಿಯಾಗಿ ನಂದಿಸಿದ್ದವು. ಅಸ್ಪಷ್ಟ ಗೋಚರತೆ ಮತ್ತು ಗಾಳಿಯಿಂದಾಗಿ ಈ ವೈಮಾನಿಕ ಕಾರ್ಯಾಚರಣೆ ಸವಾಲಿನಿಂದ ಕೂಡಿತ್ತು ಎಂದು ಅಧಿಕಾರಿಗಳು ಹೇಳಿದ್ದರು.

ಶುಷ್ಕ ಹವಾಮಾನ ಪರಿಸ್ಥಿತಿಗಳು ಮತ್ತು ಬೆಟ್ಟದ ಬುಡಕಟ್ಟು ಜನಾಂಗದವರು ಬಳಸುವ ಸಾಂಪ್ರದಾಯಿಕ ಜುಮ್ ಕೃಷಿ ಪದ್ಧತಿ ಈಶಾನ್ಯ ರಾಜ್ಯಗಳಲ್ಲಿ ಕಾಡ್ಗಿಚ್ಚಿಗೆ ಕಾರಣವಾಗಿದೆ ಎಂದು ಗುವಾಹಟಿಯಲ್ಲಿರುವ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.