Saturday, March 14, 2026
ಸುದ್ದಿ

ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ – ಕಹಳೆ ನ್ಯೂಸ್

ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ವೇಳೆ ಕೇಂದ್ರ ಸಚಿವ ನಿತೀನ್ ಗಡ್ಕರಿ ನಿಂತಲ್ಲಿಯೆ ಕುಸಿದು ಬಿದ್ದಿದ್ದಾರೆ. ಮಹಾರಾಷ್ಟ್ರದ ಅಹ್ಮದ್‌ ನಗರದಲ್ಲಿರುವ ಮಹಾತ್ಮ ಪುಲೆ ಕೃಷಿ ವಿದ್ಯಾಪೀಠದ ಘಟಿಕೋತ್ಸವದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ವೇಳೆ ಘಟನೆ ನಡೆದಿದೆ. ಕೂಡಲೆ ಪಕ್ಕದಲ್ಲಿದ್ದ ಗಣ್ಯರು ಮತ್ತು ಭದ್ರತಾ ಸಿಬಂದಿಗಳು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾದರಿಂದ ನಿತ್ರಾಣಗೊಂಡಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿದೆ.