
ಕಲ್ಲಡ್ಕ: ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ಡಿಸೆಂಬರ್ 9ರಂದು ಹೊನಲು ಬೆಳಕಿನ ಕ್ರೀಡೋತ್ಸವ ನಡೆಯಲಿದ್ದು, ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡಿತಾ ಇದೆ.
ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದಾರೆ.
ಅಲ್ಲದೇ ಮುಖ್ಯ ಪ್ರಧಾನ ಅಭ್ಯಾಗತರಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಬೆಂಗಳೂರಿನ ನ್ಯೂ ಹ್ವಾರಿಝೋನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಮಂಗ್ನಾನಿ, ಎಸಿಇ ಮ್ಯಾನುಫ್ಯಾಕ್ಚರಿಂಗ್ ಸಿಸ್ಟಮ್ ಎಲ್‍ಟಿಡಿ ಇದರ ಆಡಳಿತ ನಿರ್ದೇಶಕ ರಾಮದಾಸ್, ಭಾರತೀಯ ವಾಯುಸೇನೆಯ ನಿವೃತ್ತ ಏರ್ ಮಾರ್ಷಲ್ ಸತೀಶ್ ಪಾಲ್ ಸಿಂಗ್, ಮತ್ತಿತರರು ಭಾಗವಹಿಸಲಿದ್ದಾರೆ.














